Index   ವಚನ - 25    Search  
 
ಮಾಯದ ಮರಣದೊಳು ಛಾಯದ ಗಿಡ ಹುಟ್ಟಿ, ಒಂಬತ್ತು ಗಳಿಗೆಗೆ ಹೂವು ಕಾಯಿ ಹಣ್ಣು ಫಲವಾಗಿ, ಮರ ಬೇರುವರಿದು ಪ್ರಜ್ವಲಿಸಿದುದ ಕಂಡೆನಯ್ಯಾ! ಇದೇನು ಚೋದ್ಯ ಹೇಳಾ! ಮಾರುದ್ದ ಮರನಡಗಿ ಛಾಯದ ಗಿಡವಾಗಿ, ಪಿರಿದಪ್ಪ ವೃಕ್ಷವಾಗಿ, ಜಗಕೆ ತೋರಿದ ಭೇದವ ವೃಕ್ಷಕೆ ನೀರೆರೆದು ಸಲಹಿದಾತ ಬಲ್ಲ; ಉಳಿದವರಿಗಸಾಧ್ಯ. ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.