ವಚನ - 1193     
 
ಜ್ಞಾತೃವೆ ಅರಸುವುದು ಜ್ಞಾನವೆ ಅರಿವುದು. ಜ್ಞೇಯವೆ ನಿಶ್ಚಯಿಸುವುದು. ಈ ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿವಿಧಸಾಧನದಿಂದ ಲಿಂಗವನರಸಿ ಲಿಂಗವನರಿದು ಲಿಂಗವ ಬೆರಸಿ ಲಿಂಗವಾದ ಮತ್ತೆ, ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿವಿಧಭ್ರಾಂತಿಸೂತಕವಡಗಿ ನಿಜವಾಯಿತ್ತು ಕಾಣಾ ಗುಹೇಶ್ವರಾ.