Index   ವಚನ - 68    Search  
 
ಸಾಗರದೊಳಿಪ್ಪ ಊರಿಂಗೆ ದ್ವಾರವತಿಯ ಭಯ. ದ್ವಾರವತಿಗೆ ಅಗ್ರಗಿರಿಯ ಚಂದ್ರ ಸೂರ್ಯರ ಭಯ. ಚಂದ್ರಸೂರ್ಯರಿಬ್ಬರಿಗೆ ನಡೆಗೋಟಿಯ ಭಯ. ನಡೆಗೋಟಿಗೆ ಸ್ಪರುಷನಪುರದ ಭಯ. ಇವು ನಾಲ್ಕನೂ ಮೂರುಮುಖದ ಪಕ್ಷಿ ನುಂಗಿಕೊಂಡಿಪ್ಪುದಿದೇನು ಚೋದ್ಯ ಹೇಳಾ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.