ವಚನ - 1195     
 
ಜ್ಞಾನದುದಯವೇ ಭಕ್ತ, ಜ್ಞಾನದ ಶೂನ್ಯವೇ ಐಕ್ಯ. ಇಂತೀ ಜ್ಞಾನದಾದ್ಯಂತವನರಿವರಿವೆ ಸರ್ವಜ್ಞನಾದ ಈಶ್ವರ ನೋಡಾ. ಅದೆಂತೆಂದಡೆ: ``ಚಿದೋದಯಶ್ಚ ಸದ್ಭಕ್ತೋ ಚಿತ್ಯೂನ್ಯಂಚೈಕ್ಯಮೇವ ಚ| ಉಭಯೋರೈಕ್ಯ ವಿಜ್ಞೇಯಾತ್ಸರ್ವಜ್ಞಮೀಶ್ವರಃ||'' ಎಂದುದಾಗಿ ಇಂತೀ ಷಟ್ಸ್ಥಲದೊಳಗಾದ್ಯಂತವಡಗಿಹ ಭೇದವ ನೀನಲ್ಲದನ್ಯರೆತ್ತ ಬಲ್ಲರು ಗುಹೇಶ್ವರಾ.