Index   ವಚನ - 80    Search  
 
ಅಗ್ನಿಗೆ ಮೈಯೆಲ್ಲ ಮುಖ, ಬಲಕೆ ಮೈಯೆಲ್ಲ ಕಾಲು. ಆತ್ಮದೇಹಿಂಗೆ ದಶವಾಯುಗಳ ಮುಖದಲ್ಲಿ ಹರಿವ ಕರಣೇಂದ್ರಿಯಂಗಳೆಲ್ಲ ಮುಖ ಕಾಲಾಗಿ ಚರಿಸುತಿಪ್ಪವು. ತನುವೆಂಬ ಕೊಟಾರದೊಳು ಚರಿಸಿದರೇನು? ಅವಕೆ ಬೆಸಸೆ ಎನ್ನ ಸ್ವತಂತ್ರವಲ್ಲ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.