Index   ವಚನ - 81    Search  
 
ಹುಟ್ಟಿದ ಮಾನ್ಯರೆಲ್ಲ ದಶವಾಯು ಪಂಚಭೂತ ಸಪ್ತಧಾತು ಅರಿಷಡ್ವರ್ಗ ಅಷ್ಟಮದಂಗಳನೆಲ್ಲ ಸುಟ್ಟು ಸೂರೆಮಾಡಿ ನಿನ್ನೊಳು ಬೆರೆದರೆ, ಅಂಡಜ ಸ್ವೇದಜ ಉದ್ಬಿಜ ಜರಾಯುಜವೆಂಬ ನಾಲ್ಕು ತೆರದ ಯೋನಿಯಲ್ಲಿ ಹುಟ್ಟಿ, ಚೌರಾಸಿಲಕ್ಷ ಜೀವರಾಸಿಯಾಗಿ ಪಾಪಕರ್ಮವ ಗಳಿಸಿ ಯಮಂಗೆ ಗುರಿಯಾಗುವರಾರು? ಅದು ಕಾರಣ, ಮೋಡದಮರೆಯ ಸೂರ್ಯನಂತೆ, ಸ್ಫಟಿಕದ ಘಟದೊಳಗಣ ಜ್ಯೋತಿಯಂತೆ, ಸರ್ವರ ಆತ್ಮದೊಳು ಮರೆಗೊಂಡುಯಿಪ್ಪ ತನುಗುಣ ಮನಗುಣ ಅಹಂಕಾರ ಮಾಯಾಮದದ ತಮಂಧದ ಕತ್ತಲೆಯ ಮರೆಮಾಡಿ ಕಾಣಗೊಡದೆಯಿಪ್ಪ ಮರೆಗೊಂಡ ಭೇದವ ಶಿವಶರಣರು ಬಲ್ಲರುಳಿದ ನರಗುರಿಗಳಿಗಸಾಧ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.