Index   ವಚನ - 110    Search  
 
ಕಾಮವಿಲ್ಲದಾತ ಭಕ್ತ , ಕ್ರೋಧವಿಲ್ಲದಾತ ಮಹೇಶ್ವರ, ಲೋಭವಿಲ್ಲದಾತ ಪ್ರಸಾದಿ, ಮೋಹವಿಲ್ಲದಾತ ಪ್ರಾಣಲಿಂಗಿ, ಮದವಿಲ್ಲದಾತ ಶರಣ, ಮತ್ಸರವಿಲ್ಲದಾತ ಐಕ್ಯ. ಅದು ಎಂತೆಂದೊಡೆ: ಕಾಮವಿಲ್ಲದ ಭಕ್ತ ಬಸವಣ್ಣ, ಕ್ರೋಧವಿಲ್ಲದ ಮಹೇಶ್ವರ ಪ್ರಭುರಾಯ, ಲೋಭವಿಲ್ಲದ ಪ್ರಸಾದಿ ಚೆನ್ನಬಸವೇಶ್ವರದೇವರು, ಮೋಹವಿಲ್ಲದ ಪ್ರಾಣಲಿಂಗಿ ಘಟ್ಟಿವಾಳಯ್ಯ, ಮದವಿಲ್ಲದ ಶರಣ ಮೋಳಿಗೆಯ್ಯನವರು, ಮತ್ಸರವಿಲ್ಲದ ಲಿಂಗೈಕ್ಯಳು ನೀಲಲೋಚನ ತಾಯಿ. ಇಂತಿವರು ಮುಖ್ಯವಾದ ಏಳನೂರ ಎಪ್ಪತ್ತು ಅಮರಗಣಂಗಳ ಪಾದಕ್ಕೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.