Index   ವಚನ - 112    Search  
 
ಆನೆಯ ನುಂಗಿದ ಹುಲಿ, ಹುಲಿಯ ನುಂಗಿದ ಸರ್ಪ, ಸರ್ಪನ ನುಂಗಿದ ಸಿಂಹ, ಸಿಂಹನ ನುಂಗಿದ ಮರೆ, ಮರೆಯ ನುಂಗಿದ ಭಲ್ಲೂಕ ಇಂತಿವರು ಹಕ್ಕಿಯ ಹೊಲನಲ್ಲಿ ತಮ್ಮ ತಮ್ಮ ವೈರತ್ವದಿಂದಲಿರುವುದಿದೇನು ಚೋದ್ಯ ಹೇಳಾ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.