Index   ವಚನ - 125    Search  
 
ಸಪ್ತವ್ಯಸನವೆಂಬ ಪಾಪಿಯ ಕೂಸಿಂಗೆ ಒಪ್ಪಿಸಿಕೊಟ್ಟು ನೀನಗಲಬೇಡವೊ ಗುರುವೆ. ಉರಿಗೆ ಕೊಟ್ಟ ಅರಗಿನಂದದಿ, ಕಿರಾತನ ಕೈಯ ಲಿರುವ ಎರಳೆಯ ಮರಿಯಂತೆ, ಪಂಜರದೊಳಗ- ಣರಗಿಣಿಯ ಮಾರ್ಜಾಲಗೆ ಸೆರೆಗೊಡುವಂತೆ, ಪರಿಯಲೆನ್ನನು ಮನಭ್ರಮೆಯ ಸಪ್ತವ್ಯಸನಕ್ಕೆ ಗುರಿಮಾಡಿ ನೀ ಎನ್ನ ಅಗಲಿಹೋಗದೆ ಕರುಣಾ ಕರ ರಕ್ಷಿಸಯ್ಯಾ ಕೃಪೆಯಿಂದ ರಕ್ಷಿಸು ಸದ್ಗುರುರಾಯ. | 1 | ತನು ಮನ ವ್ಯಸನ ತಪಸ್ಸಂಧಕಾರದ ಧನವ್ಯಸನದ ಬಯಕೆಯ ರಾಜ್ಯವ್ಯಸನದ ವಿನಯದುತ್ಸಾಹ ವ್ಯಸನವಿಶ್ವಾಸದಿಂದ ಪರರ ಅನುದಿನ ಆಶ್ರಯಿಸುವ ಸೇವಕ ವ್ಯ ಸನಗುಣವ ಕೊಟ್ಟು ಸಪ್ತವ್ಯಸನಕ್ಕೆ ಗುರಿ ಮಾಡಿ ತ್ರಿಣಯ ಸದ್ಗುರುರಾಯ ಅಗಲದಿರಯ್ಯ. | 2 | ಓಡಿನಲ್ಲುಂಟೆ ಕನ್ನಡಿಯ ನೋಟವು? ಭವ ಕಾಡೊಳು ತಿರುಗಿಯೆ ಸತ್ತು ಹುಟ್ಟುತಿಹೆ; ಮೂಢನಪಾಯವ ಕಾಯೋ ದೇವ, ನಿಮ್ಮೊ ಳಾಡಲು ಹುರುಳಿಲ್ಲ, ಎನ್ನ ಗುಣವನು ನೋಡಿ ಕಾಡದೆ ಬಿಡಬೀಸದೆ ಕುಮಾರನ ಕೂಡಿಕೊ ಗುರು ಪಡುವಿಡಿ ಸಿದ್ಧಮಲ್ಲೇಶ. | 3 |