Index   ವಚನ - 129    Search  
 
ಮೊಲನ ಕಂಡರೆ ಶ್ವಾನಂಗಳು ತುಡುಕುವಂತೆ. ಹೊನ್ನು ಹೆಣ್ಣು ಮಣ್ಣು ಮೂರೆಂಬ ಮೊಲಕ್ಕೆ ಪಂಚೇಂದ್ರಿಯಂಗಳೆಂಬ ಬೇಟೆಯ ನಾಯಿಗಳು ತೊಡರುತ ಎನ್ನ ಬಿಡು ತನ್ನ ಬಿಡು ಎನ್ನುತ್ತಲಿವೆ. ನೊಂದೆನಿವರ ದಾಳಿಯಲ್ಲಿ, ಬೆಂದೆನಿವರ ದಾಳಿಯಲ್ಲಿ. ನೊಂದು ಬೆಂದು ಕುಂದಿ ಕುಸಿವನ `ಕಂದ ಬಾ' ಎಂದು ಎನ್ನ ತಲೆದಡಹೊ ಭವವಿರಹಿತ ತಂದೆ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.