ವಚನ - 1201     
 
ತತ್ತಿಯೊಳಗಣ ಹಕ್ಕಿಯ ಪ್ರಾಣವದೆತ್ತಣಿಂದ ತೋರಿತ್ತೊ? ಅದು ಮಾತನಾಡುವ ಬೆಡಗ ಜಡಜೀವಿಗಳೆತ್ತ ಬಲ್ಲರು? ಎತ್ತಿನ ಮರೆಯ ಬೇಟೆಕಾರನ ಅಡವಿಯ ಮೃಗವೆತ್ತ ಬಲ್ಲವು ಗುಹೇಶ್ವರಾ?