Index   ವಚನ - 135    Search  
 
ರಾಜಂಗೆ ಮಂತ್ರಿ ಮುಖ್ಯವಾದಂತೆ ಬಾಹ್ಯಪ್ರಾಣಕ್ಕೆ ಮನವೆ ಮುಖ್ಯ ನೋಡಾ. ಮನ ಮುಖ್ಯವಾಗಿ ಸರ್ವಪಾಪ ಅನ್ಯಾಯವ ಗಳಿಸಿ, ಕಾಲಂಗೆ ಗುರಿಮಾಡಿ, ಜನನ ಮರಣಕ್ಕೆ ತರಿಸಿ, ಮುನ್ನ ಕಾಡುತ್ತಿದೆ. ಮನವ ನಿರಸನವ ಮಾಡುವರೆನ್ನಳವೆ? ನಿನ್ನಳವ ಎನ್ನೊಳಿತ್ತು ಮನ್ನಿಸಿ ಕಾಯಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.