ವಚನ - 1203     
 
ತತ್ತ್ವಾತತ್ತ್ವಂಗಳಿಲ್ಲದಂದು, ಸಾಕ್ಷಿಸಭೆಗಳಿಲ್ಲದಂದು, ಏನೇನಿಲ್ಲದಂದು, ಬಯಲು ಬಲಿವಂದು ಈ ಬಿಂದುವಾಯಿತ್ತು. ಆ ಬಿಂದು ಅಕ್ಷರತ್ರಯ ಗದ್ದಿಗೆಯಲ್ಲಿ ಕುಳ್ಳಿರಲು ಲೋಕದುತುಪತಿಯಾಯಿತ್ತು. ನಾದದ ಬಲದಿಂದ ಮೂರ್ತಿಯಾದನೊಬ್ಬ ಶರಣ. ಆ ಶರಣನಿಂದಾದುದು ಪ್ರಕೃತಿ, ಆ ಪ್ರಕೃತಿಯಿಂದಾಯಿತು ಲೋಕ ಲೌಕಿಕ. ಆ ಲೋಕ ಲೌಕಿಕವನತಿಗಳೆದು ನಿಜದಲ್ಲಿ ನಿವಾಸಿಯಾಗಿಪ್ಪ ಗುಹೇಶ್ವರ, ನಿಮ್ಮ ಶರಣ ಸಂಗನಬಸವಣ್ಣ.