ವಚನ - 1207     
 
ತನ್ನ ತಾನರಿದಡೆ ನುಡಿಯೆಲ್ಲ ತತ್ತ್ವ ನೋಡಾ! ತನ್ನ ತಾ ಮರೆದಡೆ ನುಡಿಯೆಲ್ಲ ಮಾಯೆ ನೋಡಾ! ಅರಿದು ಮರೆದ ಶಿವಯೋಗಿಯ ಶಬ್ದವೆಲ್ಲವು ಉಪದೇಶವಲ್ಲದೆ ಭಿನ್ನವುಂಟೆ? ನಿನ್ನ ಮನದ ಕಳವಳವ ತಿಳುಹಲೆಂದು ಮಾತನಾಡಿಸಿ ನೋಡಿದಡೆ, ಎನ್ನ ಮನದೊಳಗೆ ಕಂದು ಕಲೆ ಎಂಬುದಿಲ್ಲ ನೋಡಾ! ನಮ್ಮ ಗುಹೇಶ್ವರಲಿಂಗಕ್ಕೆ ನೀನು ಕರುಣದ ಶಿಶುವಾದ ಕಾರಣ ಬಾಯ್ದೆಗೆದೆನಲ್ಲದೆ, ಭಿನ್ನವುಂಟೆ ಹೇಳಾ ಮರುಳೆ?