ವಚನ - 1211     
 
ತನು ಉಂಟೆಂದಡೆ ಪಾಶಬದ್ಧ, ಮನ ಉಂಟೆಂದಡೆ ಭವಕ್ಕೆ ಬೀಜ. ಅರಿವ ನುಡಿದು ಕೆಟ್ಟೆನೆಂದರೆ ಅದೇ ಅಜ್ಞಾನ. ಭಾವದಲ್ಲಿ ಸಿಲುಕಿದೆನೆಂಬ ಮಾತು ಬಯಲ ಭ್ರಮೆ ನೋಡಾ. ಒಮ್ಮೆ ಕಂಡೆ-ಒಮ್ಮೆ ಕಾಣೆ, ಒಮ್ಮೆ ಕೂಡಿದೆ- ಒಮ್ಮೆ ಅಗಲಿದೆ ಎಂದಡೆ ಕರ್ಮ ಬೆಂಬತ್ತಿ ಬಿಡದು. ನಿನ್ನೊಳಗೆ ನೀ ತಿಳಿದುನೋಡಲು ಭಿನ್ನವುಂಟೆ? ಗುಹೇಶ್ವರಲಿಂಗವನರಿವಡೆ ನೀನೆಂದೇ ತಿಳಿದು ನೋಡಾ ಮರುಳೆ?