Index   ವಚನ - 1213    Search  
 
ತನುಗುಣನಾಸ್ತಿಯಾಗಿ ಲಿಂಗಸಂಗಿಯಾದಳು. ಮನಗುಣನಾಸ್ತಿಯಾಗಿ ಅರಿವುಸಂಗಿಯಾದಳು. ಭಾವಗುಣನಾಸ್ತಿಯಾಗಿ ಮಹಾಪ್ರಭೆ ತಾನಾದಳು. `ತಾನು' `ಇದಿರು' ಎಂಬ ಎರಡಳಿದು ನಮ್ಮ ಗುಹೇಶ್ವರಲಿಂಗದಲ್ಲಿ ಸ್ವಯಲಿಂಗವಾದ ಮಹಾದೇವಿಯಕ್ಕಗಳ ನಿಲವಿಂಗೆ ಶರಣೆನುತಿರ್ದೆನು.