ವಚನ - 1225     
 
ತಪವೆಂಬುದು ತಗಹು, ನೇಮವೆಂಬುದು ಬಂಧನ, ಶೀಲವೆಂಬುದು ಸೂತಕ, ಭಾಷೆಯೆಂಬುದು ಪ್ರಾಣ ಘಾತಕ. ಇಂತೀ ಚತುರ್ವಿಧದೊಳಗಲ್ಲ ಗುಹೇಶ್ವರಾ ನಿಮ್ಮ ಶರಣರು ಅಗ್ರಗಣ್ಯರು.