Index   ವಚನ - 16    Search  
 
ಹೊನ್ನು ಸಂಸಾರವಲ್ಲ, ಹೆಣ್ಣು ಸಂಸಾರವಲ್ಲ, ಮಣ್ಣು ಸಂಸಾರವಲ್ಲ, ಈ ಮೂರರ ಮೇಲಣ ಮೋಹವೆರಸಿದ ಮನವು ಸಂಸಾರ ನೋಡಾ! ಆ ಮನವನು ಸಂಸಾರ ಮೋಹವನು ಬೇರ್ಪಡಿಸಿ, ತನ್ನ ಕೂಡಿ ನಡೆವ ಗತಿಮತಿಗಳನಾರನು ಕಾಣೆನಯ್ಯಾ ನಿರಂಜನ ಚನ್ನಬಸವಲಿಂಗಾ.