ವಚನ - 1233     
 
ತಾನೆಂದೆನಲೊಲ್ಲದೆ ಗುರುವೆಂದು ಹಿಡಿದವನ, ಗುರುವೆಂದಲ್ಲಿಯೆ ನೀನೆಂದು ನಡೆದವನ, ನೀನೆಂದಲ್ಲಿಯೆ ಲಿಂಗಜಂಗಮದ ಸಕೀಲಸಂಬಂಧವ ನೆಲೆಗೊಳಿಸಿದವನ, ಲಿಂಗಜಂಗಮದಲ್ಲಿ ತನ್ನ ಮರೆದು ಕರಿಗೊಂಡ ಲಿಂಗೈಕ್ಯನ, ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.