ವಚನ - 1236     
 
ತಾಯಿಗಾದ ಸುಖದುಃಖಂಗಳು ಬಸಿರ ಶಿಶುವಿಂಗೆ ನೋಡಯ್ಯಾ. ಶಿವಶರಣರಿಗೆ ಮಾಡಿದ ಸುಖದುಃಖಗಳು ಶಿವನ ತಾಗುವುವು. ಕರಣವುಳ್ಳವರು ಮರಣವಿಲ್ಲದವಂಗೆ ಮುಳಿದಡೆ ತನುವುಳ್ಳವರ ಮುಟ್ಟುವುದಲ್ಲದೆ, ಒಡಲಿಲ್ಲದಾತನ ಮುಟ್ಟಬಲ್ಲುದೆ? ಗುಹೇಶ್ವರಾ ಕೆಂಡವ ಒರಲೆ ಮುಟ್ಟಬಲ್ಲುದೆ?