Index   ವಚನ - 221    Search  
 
ಬಹುಜನ್ಮಭಾರಿಗಳ ಕರತಂದು ಹಿರಿಯತನದಾಸೆಗೆ ಹರಿದು ಉಪದೇಶವ ಕೊಟ್ಟರೆ ಗುರುಶಿಷ್ಯಭಾವ ಸರಿಯಪ್ಪುದೆ? ಕಣ್ಣಿಲ್ಲದ ಗುರು, ಕುರುಡ ಶಿಷ್ಯ, ಅವರಿಗಾಚಾರ ವಿಚಾರ ಸಮಯಾಚಾರಸಂಬಂಧವೆಂತಪ್ಪುದಯ್ಯಾ, ಭೂತ ಅದ್ಭೂತ ಅವಿಚಾರ ಘಟಿತರಿಗೆ ಗುರುನಿರಂಜನ ಚನ್ನಬಸವಲಿಂಗಾ?