Index   ವಚನ - 248    Search  
 
ನಾದ-ಬಿಂದು-ಕಲಾಸಂಚ ನಿರಂಜನಲಿಂಗವನು ಪರಮಗುರುಮುಖದಿಂದೆ ಸಾಧಿಸಿ, ಕರಕಂಜದೊಳಗಿರಿಸಿ, ಉರವಣಿ ಬಟ್ಟೆಗಳ ಸವರಿ, ಕಳೆವ ಕರಡವಿಯೊಳೆಸೆವುತ, ಪರಿಪರಿಯಿಂದೆ ಅಣುಮಾತ್ರ ಮೂರು ವಿದ್ಯೆಕೆ ಮರವೆಯ ತಾರದೆ, ಎಡಬಲದ ನಡೆನುಡಿ ಜಾಣರನೊಳಕೊಳ್ಳದೆ ಹಿಡಿತ ಬಿಡಿತಗಳರಿದು, ಜರೆದು ನೂಂಕುತ ಹಿಡಿದುಕೊಂಬುತ ಶರಣು ಶರಣೆಂದು ಬೆರೆದು ಬೆರಗಾಗಿರ್ಪ ಗುರುನಿರಂಜನ ಚನ್ನಬಸವಲಿಂಗದಲ್ಲಿ ಪರಮಮಾಹೇಶ್ವರ.