Index   ವಚನ - 256    Search  
 
ನಡೆನುಡಿಯಿಲ್ಲದ ಘನವು ನಡೆನುಡಿಗಡಿಯಿಟ್ಟು ಬಂದರೆ ಎನ್ನ ಸಡಗರ ಹೆಚ್ಚಿತ್ತು ನೋಡಾ! ಬಡಿವಾರದ ಬಲವಯ್ಯಾ, ಕರ್ತು ಭೃತ್ಯಕಳೆ ಉನ್ನತವಾಗಿ ಶಕ್ತಿಯನು ಮುಕ್ತಿದಾಯಕ ಮುನಿಸಿಲ್ಲದೆ ಮುಂದುವರಿ. ನಾದ ಬಿಂದು ಕಳೆ ನವೀನವಯ್ಯಾ. ಮೂದೇವರೊಡೆಯ ಶರಣು ಶರಣು ಕರುಣಾನಿಧಿ ಗುರುನಿರಂಜನ ಚನ್ನಬಸವಲಿಂಗಾ.