Index   ವಚನ - 263    Search  
 
ಗಂಡಗಿಕ್ಕದೆ ಮಾಡಿ ತಪ್ಪಿಸಿ ತಿಂಬ ದಿಂಡೆಹೆಂಗಳೆಯಂತೆ ಕರ್ತುಗಳಿಗೆ ಅರ್ಥವ ಸವೆಯದೆ ಸಟೆವೆರೆದು ಬಾಳುವ ಕುಟಿಲಗಳ್ಳರಿಗೆಂತಪ್ಪುದಯ್ಯಾ ಭಕ್ತಿ? ಸತ್ಯ ಧನವ ನಿತ್ಯ ನಿತ್ಯವರಿದು ಮರೆದಿತ್ತಡೆ ಕರ್ತುವೊಲಿವ ನಮ್ಮ ಗುರುನಿರಂಜನ ಚನ್ನಬಸವಲಿಂಗಾ.