ಮೊದಲಿಂದತ್ತಲರಿಯದೆ, ಕಡೆಯಿಂದ ಮೇಲೆ ಕಾಣದೆ,
ಚದುರಿನ ಹದನ ಸದನ ಸಂಭ್ರಮಕ್ಕೆ ಒದಗಿ ಬಿದ್ದೊರಲಿದರು
ಅಜ ವಿಷ್ಣು ಇಂದ್ರಾದಿ ಸಕಲ ಸಂದೋಹ.
ಉಳಿದ ಉಚ್ಛಿಷ್ಟ ಬಚ್ಚಲದೊಳು ಬಿದ್ದ ಪ್ರಾಣಿಗಳಂತಿರಲಿ,
ಮತ್ತೆ ಕೋಟಲೆಯ ಕಳೆದು ರಾಟಣವ ಹರಿದು,
ನಿಜಬೇಟವರಿದು ನಿರ್ಮಲವನರ್ಪಿಸಿ,
ನಿರಾವಯವ ಕೊಂಡಾಡುವ ನಿಜಪ್ರಸಾದಿಗಲ್ಲದೆ
ಅಸಾಧ್ಯ ಕಾಣಾ ಗುರುನಿರಂಜನ ಚನ್ನಬಸವಲಿಂಗ.