ವಚನ - 1263     
 
ಧ್ಯಾನ ಆಧ್ಯಾತ್ಮಿಕದಲ್ಲಿ ಕಂಡಹೆನೆಂಬುದು ಜೀವನಲ್ಲದೆ ಪರಮನಲ್ಲ. ಜಪ-ತಪ ನೇಮ-ನಿತ್ಯಂಗಳಿಂದ ಕಂಡಹೆನೆಂಬುದು ಪ್ರಕೃತಿಯಲ್ಲದೆ ಸುಚಿತ್ತವಲ್ಲ. ಭಾವದಿಂದ ಪ್ರಮಾಣಿಸುವುದೆ ಏಕರೂಪ, ಗುಹೇಶ್ವರಲಿಂಗವು ತಾನೆ.