ವಚನ - 1265     
 
ನಡೆದಡೆ ನಡೆಗೆಟ್ಟ ನಡೆಯ ನಡೆವುದಯ್ಯಾ. ನುಡಿದಡೆ ನುಡಿಗೆಟ್ಟ ನುಡಿಯ ನುಡಿವುದಯ್ಯಾ. ಒಡಲ ಹಿಡಿದಡೆ ಹಿಡಿಯದೆ ಹಿಡಿವುದಯ್ಯಾ. ಕೂಡುವಡೆ ಕೇಡಿಲ್ಲದ ಕೂಟವ ಕೂಡುವುದಯ್ಯಾ, ಗುಹೇಶ್ವರಾ ನಿಮ್ಮಲ್ಲಿ ನಿಲುವುದಯ್ಯಾ.