Index   ವಚನ - 390    Search  
 
ಕೊಟ್ಟುಕೊಂಡೆನೆಂಬುದೊಂದುಳ್ಳರೆ ಒಂದಕ್ಕೆ ಭಂಗ, ಕೊಡುಕೊಳ್ಳಿಯಳಿದುಳಿದರೆ ಎರಡಕ್ಕೆ ಭಂಗ. ಒಂದು ಭಂಗ ಭವಕ್ಕೆ ಬೀಜ, ಎರಡು ಭಂಗ ಲೀಲೆಗೇಡು, ಒಂದೆರಡರಿಯದೆ ಅಂದಂದಿಗಿತ್ತಡೆ ಅವಧಾನಿಸಿಕೊ ಗುರುನಿರಂಜನ ಚನ್ನಬಸವಲಿಂಗಾ.