Index   ವಚನ - 440    Search  
 
ತಾಯಿಯಲ್ಲಿ ಬಯಸಿ ತಂದ ತಲೆಯ ಕೈಯೊಳಿಟ್ಟು ಕಾಣದಿರ್ದೊಡೆ ಸವಿಸುಖ ತಪ್ಪಿತ್ತು. ಮಣ್ಣೊಳಗೆ ಮುಚ್ಚಿದರೆ ಒಂದನೆಯ ಸುಖ ತಪ್ಪಿತ್ತು. ಜಲದೊಳಗೆ ಮುಚ್ಚಿದರೆ ಎರಡನೆಯ ಸುಖ ತಪ್ಪಿತ್ತು. ಕಿಚ್ಚಿನೊಳಗೆ ಮುಚ್ಚಿದರೆ ಮೂರನೆಯ ಸುಖ ತಪ್ಪಿತ್ತು. ಗಾಳಿಯೊಳಗೆ ಮುಸುಕಲಿಟ್ಟರೆ ನಾಲ್ಕನೆಯ ಸುಖ ತಪ್ಪಿತ್ತು. ಅಂಬರದೊಳಗಡಗಿಸಿದರೆ ಐದನೆಯ ಸುಖ ತಪ್ಪಿತ್ತು. ಕರ್ತಾರನಲ್ಲಿಟ್ಟು ಕಾಣಿಸದಿರ್ದಡೆ ಆರನೆಯ ಸುಖ ತಪ್ಪಿತ್ತು. ಈ ಸುಖವನರಿಯದೆ ಮತ್ತೆ ಮತ್ತೆ ಮಾಡಿಕೊಂಡರೇನು ಅತ್ತತ್ತಲರಿಯದೆ ವ್ಯರ್ಥವಾಯಿತ್ತು ಗುರುನಿರಂಜನ ಚನ್ನಬಸವಲಿಂಗವು ಸಾಕ್ಷಿಯಾಗಿ.