Index   ವಚನ - 1275    Search  
 
ನಾನೀನೆಂಬ ಭಾವವಾರಿಂದಾಯಿತ್ತು ಹೇಳಾ? ನೀನೆಂಬುದೆ ಅಜ್ಞಾನ, ನಾನೆಂಬುದೆ ಮಾಯಾಧೀನ. ನೀನೆನ್ನದೆ ನಾನೆನ್ನದೆ ಇಪ್ಪ ಸುಖವ, ಭಿನ್ನವಿಲ್ಲದೆ ಅರಿಯಬಲ್ಲಡೆ ಆ ಸುಖ ನಿಮಗರ್ಪಿತ ಕಾಣಾ ಗುಹೇಶ್ವರಾ.