ವಚನ - 1277     
 
ನಾನೆಂಬ ಅಹಂಕಾರ ತಲೆದೋರಿದಲ್ಲಿ ಅಟಮಟ ಕುಟಿಲ ಕುಹಕವೆಂಬ ಬಿರುಗಾಳಿ ಹುಟ್ಟಿತ್ತು. ಆ ಬಿರುಗಾಳಿ ಹುಟ್ಟಲೊಡನೆ ಜ್ಞಾನಜ್ಯೋತಿ ಕೆಟ್ಟಿತ್ತು. ಜ್ಞಾನಜ್ಯೋತಿ ಕೆಡಲೊಡನೆ, ನಾ ಬಲ್ಲೆ, ಬಲ್ಲಿದರೆಂಬ ಅರುಹಿರಿಯರೆಲ್ಲರು ತಾಮಸಕ್ಕೊಳಗಾಗಿ ಸೀಮೆದಪ್ಪಿ ಕೆಟ್ಟರು ಕಾಣಾ ಗುಹೇಶ್ವರಾ.