ವಚನ - 1278     
 
ನಾನೆಂಬ ಅಹಂಕಾರದಲ್ಲಿ ನಾನುಂಡೆನಾದಡೆ, ಎನಗದೆ ಭಂಗ. ಸ್ತುತಿ ನಿಂದೆಗೆ ನೊಂದೆನಾದಡೆ ಅಂಗೈಯಲ್ಲಿರ್ದ ಗುಹೇಶ್ವರಲಿಂಗಕ್ಕೆ ದೂರ ಕಾಣಾ ಸಂಗನಬಸವಣ್ಣಾ.