Index   ವಚನ - 1281    Search  
 
ನಿಂದಡೆ, ಹೊನ್ನು ಹೆಣ್ಣು ಮಣ್ಣು ಹಿಡಿದು ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದಡೆ, ಹೊನ್ನು ಹೆಣ್ಣು ಮಣ್ಣು ಬಿಟ್ಟು ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಲ್ಲದ, ಸುಳಿದು ಜಂಗಮವಲ್ಲದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ?