ವಚನ - 1285     
 
ನಿತ್ಯನಿರಂಜನ ನಿರವಯಖಂಡ ಪರವಸ್ತುವಿನತ್ತಣಿಂದುದಯಿಸಿ, ನಿಂದ ನಿಲವನರಿದು ಭಕ್ತ, ಗುರುಪ್ರಸನ್ನವಿಡಿದು ಮಾಹೇಶ್ವರ, ಲಿಂಗಪೂಜೆಯವಿಡಿದು ಪ್ರಸಾದಿ, ಸ್ವಾನುಭಾವ ವಿವೇಕವಿಡಿದು ಪ್ರಾಣಲಿಂಗಿ, ಸ್ವಯಾನಂದವಿಡಿದು ಶರಣ, ಸೋಹಂ ಬ್ರಹ್ಮಾಸ್ಮಿನ್ನೆಂದು ಲಿಂಗೈಕ್ಯ. ಇಂತೀ ಷಟ್ಸ್ಥಲ ಸಂಪನ್ನನಾಗಿ, ನಿಂದ ನಿಲವ ನೀ ಬಲ್ಲೆಯಲ್ಲದೆ ಲೋಕದ ಸಂದೇಹಿಮಾನವರೆತ್ತ ಬಲ್ಲರು ಗುಹೇಶ್ವರಾ.