Index   ವಚನ - 605    Search  
 
ಮಾತು ಮಾತಿನ ತೂತಜ್ಞಾನಿಗಳಿಗೆತ್ತಣ ಶರಣಸ್ಥಲವಯ್ಯಾ? ಸೋತು ನಡೆಯರು ಗುರುಹಿರಿಯರಿಗೆ ಖ್ಯಾತಿಯ ಮುಂದಿಟ್ಟು ಮಲತ್ರಯದಾಸೆಯೊಳು ಮುಳುಗಿ. ಇತರರ್ಗೆ ನೀತಿ ನೂತನದಿಂದೆ ಜರಿದು ತನ್ನನರಿಯದೆ ಭಿನ್ನವಿಟ್ಟು ಮನಗೂಡಿ ಚರಿಸುವ ಶುನಕರು ಶರಣರೆಂದರೆ ಸರಿಯಪ್ಪುದೆ? ನಾಚಿಕೆಯಿಲ್ಲದ ನಾಡಭೂತಗಳನೆನಗೊಮ್ಮೆ ತೋರದಿರಯ್ಯಾ ನಿಮ್ಮ ಧರ್ಮ ಗುರುನಿರಂಜನ ಚನ್ನಬಸವಲಿಂಗಾ.