Index   ವಚನ - 627    Search  
 
ಆರಾರು ಸಕಲಸನ್ನಿಹಿತರರಿತಕ್ಕಗೋಚರ ಪರಶಿವಲಿಂಗವನು, ಆರೈದು ಅಂಗಪ್ರಾಣಾತ್ಮ ಸಂಗಸಮರಸಾನಂದ ಶರಣಂಗೆ ಒಂದೂ ಆಶ್ಚರ್ಯ ತೋರದು, ಅದೇನು ಕಾರಣವೆಂದೊಡೆ, ತಾನೆ ಹರಿ ವಿಧಿ ಸುರಾದಿ ಮನುಮುನಿ ಸಕಲಕ್ಕೂ ಆಶ್ಚರ್ಯವಾದ ಕಾರಣ. ಅಂತಪ್ಪ ಶರಣನೇ ಶಿವನಲ್ಲದೆ ಬೇರಿಲ್ಲ ಕಾಣಾ. ಅದಲ್ಲದೆ ಮತ್ತೆ ಗಿರಿಗೋಪುರ ಗಂವರ ಶರಧಿತಾಣ ಸ್ಥಾವರಕ್ಷೇತ್ರ ನರಕುಶಲ ಕುಟಿಲ ಭೂತಾದಿ ಕಿಂಚಿತಕ್ಕಾಶ್ಚರ್ಯವೆಂಬ ಬಾಲಮರುಳ ಅಜ್ಞಾನಿಗಳಿಗೆ ಲಿಂಗಶರಣರೆಂಬ ನಾಮ ಬಹು ಭಾರ ಕಾಣಾ ಗುರುನಿರಂಜನ ಚನ್ನಬಸವಲಿಂಗಕ್ಕೆ.