ವಚನ - 1299     
 
ನೀನು' 'ನಾನು' ಎಂಬ ಉಭಯಸಂಗವಳಿದು ತಾನು ತಾನಾದ ತ್ರಿಕೂಟವೆಂಬ ಮಹಾಗಿರಿಯ ತುಟ್ಟತುದಿಯ ಮೆಟ್ಟಿ ನೋಡಲು, ಬಟ್ಟಬಯಲು ಕಾಣಬಹುದು ನೋಡಾ! ಆ ಬಯಲ ಬೆರಸುವಡೆ ತ್ರಿಕೂಟಗಿರಿಯೊಳಗೊಂದು ಕದಳಿಯುಂಟು ನೋಡಾ! ಆ ಕದಳಿಯ ತಿಳಿದು ಅಲ್ಲಿ ಒಳಹೊಕ್ಕು ನೋಡಲು ತೊಳಗಿ ಬೆಳಗುವ ಜ್ಯೋತಿಯುಂಟು ಕೇಳಾ! ನಡೆ ಅಲ್ಲಿಗೆ ತಾಯೆ, ಗುಹೇಶ್ವರಲಿಂಗದಲ್ಲಿ ಪರಮಪದವಿ ನಿನಗೆ ಸಯವಪ್ಪುದು ನೋಡಾ.