ವಚನ - 1302     
 
ನೀರ ಬೊಂಬೆಯ ಚೋಹವ ತೊಟ್ಟು, ಅಗ್ನಿಯ ಬಣ್ಣದ ಹೊದಕೆಯ ಹೊದ್ದು, ಗಾಳಿಯ ಗತಿಯಲ್ಲಿ ಸುಳಿದಾಡುವ ಪ್ರಾಣಿಗಳು ದೇವರನೆತ್ತ ಬಲ್ಲರು ಗುಹೇಶ್ವರಾ?