ನವಭಕ್ತಿರಸವಕೊಂಡು ಶಿವಪ್ರಸಾದವನಿತ್ತ ಬಳಿಕ
ಆ ಪ್ರಸಾದವನೊಂದೆರಡು ಮೂರಾರು ಮತ್ತೆ
ಮುಖಮುಖವರಿದು ವೇಧಿಸಿದಲ್ಲಿ ಕಿರಿಕುಳವಲ್ಲುಂಟೆ?
ಬರಿಕುಳವಿಲ್ಲುಂಟೆ? ಕುಳಂಗಳ ನಿಲಿಸಿ ಕೂರ್ಪರೊಳು
ಬೆರೆದು ಕೂಡಬಾರದು.
ಅದು ಕಾರಣ ಸೂತ್ರದ ಸುಳುಹು ಕಳಚಲಾಗದು ಕನಸಿನಲ್ಲಿ.
ಕಾರಣಮೂರ್ತಿಯ ಕಲ್ಪಿತಕ್ಕೆ ಇದೇ ಕುರುಹು
ಗುರುನಿರಂಜನ ಚನ್ನಬಸವಲಿಂಗದಲ್ಲಿ.