ವಚನ - 1331     
 
ಪರುಷದ ಪುತ್ಥಳಿಗೆ ಕಬ್ಬುನದ ಆಭರಣಗಳುಂಟೆ ಅಯ್ಯಾ? ಲೋಕದೊಳಗೆ ಲಿಂಗ, ಲಿಂಗದೊಳಗೆ ಲೋಕವಾದಡೆ ಹಿಂದಣ ಪ್ರಳಯಂಗಳೆಂತಾದವು? ಇನ್ನು ಮುಂದಣ ಪ್ರಳಯಗಳಿಗಿನ್ನೆಂತೊ? ಲೋಕವು ಲೋಕದಂತೆ, ಲಿಂಗವು ಲಿಂಗದಂತೆ, ಈ ಉಭಯ ಭೇದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.