ವಚನ - 1342     
 
ಪೃಥ್ವಿಯ ಪಾಷಾಣ ಪೃಥ್ವಿಯ ಮೇಲೆ ಬಿದ್ದು ಹೋದಡೆ ಪ್ರಾಣಲಿಂಗ ಹೋಯಿತ್ತು, ಪ್ರಾಣಲಿಂಗ ಹೋಯಿತ್ತು ಎಂಬಿರಿ. ಪ್ರಾಣಲಿಂಗ ಹೋದಡೆ ನೀವು ನುಡಿವ ಪರಿಯೆಂತು? ಅಂತರಂಗದಿ ಪ್ರಾಣಲಿಂಗಸಂಬಂಧದ ಸುದ್ದಿಯನರಿಯರಾಗಿ, ಗುಹೇಶ್ವರಾ, ನೀ ಮಾಡಿದ ಬೆಡಗು ಬಿನ್ನಾಣಕ್ಕೆ ನಾನು ಬೆರಗಾದೆನು!