Index   ವಚನ - 1224    Search  
 
ಇಂದ್ರಿಯಂಗಳ ಗಮನಗೆಡದೆ ಕರಣಂಗಳ ಸೂತಕ ಕಡೆಗಾಗದೆ ಆತ್ಮನ ಕುರುಹು ಅಡಗದೆ ಬರಿದೆ ಭ್ರಮೆಗೊಂಡು ಹಿರಿಯತನವ ಹೊತ್ತರಲ್ಲ! ಮತ್ತೆ ಪೂರ್ವ ಮೊತ್ತದ ಬರಿವಿದ್ಯೆ ಬಂಧನಕ್ಕೆರಗಿ ಸಂದಿನ ಕಿಚ್ಚಿನಲ್ಲಿ ಬೆಂದರಲ್ಲ! ಒಂದುವನರಿಯದೆ ಹಿಂದಿನ ಸರಮಾಲೆಯ ಸಂಕೋಲೆಯೊಳಗಾಗಿ ಭೋಗವನರಿವರು ಕಾಣಾ ಪಂಚಾಕ್ಷರಮೂರ್ತಿಲಿಂಗವೆ.