Index   ವಚನ - 7    Search  
 
ಕಾಯವಿಡಿದು ಮಾಯೆ ಬಿಡಬೇಕೆಂಬ ಹೆಡ್ಡರಿಗೆ ಮಾಯೆ ಬಿಡುವುದು ಹೇಂಗಯ್ಯ? ದೇಹವಿಡಿದು ನೋಡಿ ಕಂಡು ಆ ಅಮೃತ ಉಂಡೆನೆಂದು ನುಡಿವರು. ಆ ಅಮೃತ ಉಂಡ ಬಳಿಕ ಹಸಿವುಂಟೆ ಹೇಳಾ. ಪ್ರಳಯವಿದ್ಯೆ ವಾತ ಪಿತ್ಥ ಶ್ಲೇಷ್ಮಂಗಳ ಕುಡಿದು ಆ ಅಮೃತವ ಉಂಡೆನೆಂದು ನುಡಿವವರಿಗೆ ಎಂದೆಂದಿಗೂ ದೊರಕದು ಕಾಣಾ. ಇಂಥ ಭ್ರಾಂತಭ್ರಮಿತರು ಕೆಟ್ಟ ಕೇಡಿಂಗೆ ಕಡೆಯಿಲ್ಲ ಮೊದಲಿಲ್ಲ. ಚಿತ್ತೇ ತಾನಾದ ಮಹಾತ್ಮಂಗೆ ಲಯವಿಲ್ಲ ಭಯವಿಲ್ಲ ಅನುವಿಲ್ಲ. ದೇಹದಿ ನೋಡುವ ಕಪಿಚೇಷ್ಟೆಗಳಿಗೆ ಎಂದೆಂದಿಗೂ ಇಲ್ಲ. ಮಹತೋತ್ತಮನಾದ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.