ವಚನ - 1359     
 
ಬಣ್ಣವುಂಡ ಚಿನ್ನದಂತೆ, ಬೆಣ್ಣೆ ಉಂಡ ಘೃತದಂತೆ, ಸ್ವರವುಂಡ ಶಬ್ದದಂತೆ, ಪರಿಮಳ[ವುಂಡ] ಪುಷ್ಪದಂತೆ, ಗುಹೇಶ್ವರಲಿಂಗದಲ್ಲಿ ಹೊರೆಯಿಲ್ಲದಿರ್ಪ ಸಂಗನಬಸವಣ್ಣನ ಭಕ್ತಿಯಾಚಾರದ ಮಹಾತ್ಮೆಯೆಂತು ಪೇಳಾ ಮಡಿವಾಳ ಮಾಚಯ್ಯಾ.