Index   ವಚನ - 36    Search  
 
ಪಂಚಶಕ್ತಿಯನು ಪಂಚಸಾದಾಖ್ಯವನು ಪಂಚಕಲೆಗಳನು ಪಂಚಾಕ್ಷರಂಗಳನು ಪಂಚಭೂತಾತ್ಮವನು ತನ್ನಲ್ಲಿ ಗರ್ಭೀಕರಿಸಿಕೊಂಡು ತಾನು ಚಿದ್ಭ್ರಹ್ಮಾಂಡಾತ್ಮಕನಾಗಿ, ಚಿನ್ಮಯನಾಗಿ, ಚಿದ್ರೂಪನಾಗಿ, ಚಿತ್ಪ್ರಕಾಶನಾಗಿ, ಚಿದಾನಂದನಾಗಿ ಸುಖ ದುಃಖ ಮೋಹ ಭಯಂಗಳ ಹೊದ್ದದೆ, ಸರ್ವವ್ಯಾಪಕನಾಗಿ, ಸರ್ವಚೈತನ್ಯಮಯನಾಗಿಪ್ಪ ಪರಂಜ್ಯೋತಿರ್ಲಿಂಗವು ಎನ್ನ ಪ್ರಾಣಲಿಂಗವಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.