Index   ವಚನ - 42    Search  
 
ಸೂರ್ಯನಿಂದ ತೋರಿದ ಕಿರಣಂಗಳಿಗೂ ಆ ಸೂರ್ಯನಿಗೂ ಭಿನ್ನವುಂಟೇ? ಚಂದ್ರನಿಂದ ತೋರಿದ ಕಲೆಗೆ ಆ ಚಂದ್ರನಿಗೂ ಭಿನ್ನವುಂಟೇ? ಅಗ್ನಿಯಿಂದ ತೋರಿದ ಕಾಂತಿಗೂ ಆ ಅಗ್ನಿಗೂ ಭಿನ್ನವುಂಟೇ? ಜ್ಯೋತಿಯಿಂದ ತೋರಿದ ಬೆಳಗಿಗೂ ಆ ಜ್ಯೋತಿಗೂ ಭಿನ್ನವುಂಟೇ? ಆಗಮ್ಯ, ಅಗೋಚರ, ಅಪ್ರಮಾಣ, ಅಪ್ರತಿಮ ಮಹಾಲಿಂಗದಲ್ಲಿ ಜ್ಯೋತಿಯಿಂದ ಜ್ಯೋತಿ ಉದಯಿಸಿದಂತೆ ಉದಯಿಸಿದ ಶರಣಂಗೂ ಆ ಮಹಾಲಿಂಗಕ್ಕೂ ಭಿನ್ನವುಂಟೇ? ಇದ ಬೇರೆಂಬ ಅರೆಮರುಳುಗಳನೇನೆಂಬೆನಯ್ಯ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.