ವಚನ - 1367     
 
ಬಲ್ಲ ಹಿರಿಯರೆನಿಸಿಕೊಂಡು ಎಲ್ಲರನು ಕೂಡಿಕೊಂಡು ಹಳ್ಳಿ ಹಿರಿಯರು ಪಟ್ಟಣದಲ್ಲಿ ತಿರಿದುಂಡು ಅಲ್ಲದಾಟವನಾಡಿದಡೆ ತಮ್ಮ ಬಲ್ಲತನಕ್ಕೆ ಭಂಗವಾಯಿತ್ತು. ಅಶನ, ವ್ಯಸನ, ಹಸಿವು, ತೃಷೆ, ನಿದ್ರೆ ಇಚ್ಛೆಗೆ ಹರಿದಾಡುವರೆಲ್ಲ ಇನ್ನು ಬಲ್ಲರೆ ಹೇಳಿರೆ! ಅನಂತ ಮೇಳಾಪದ ಚಚ್ಚಗೋಷ್ಠಿಯ ಭಂಡರೆಲ್ಲ ಇನ್ನು ಬಲ್ಲರೆ, ಹೇಳಿರೆ! ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರದಿಚ್ಛೆಗೆ ಹರಿದಾಡುವ ಹಂದಿಗಳೆಲ್ಲ ನಾಯನೊಡನಾಡಿದ ಕಂದನಂತಾಯಿತ್ತು ಗುಹೇಶ್ವರಾ.