Index   ವಚನ - 97    Search  
 
ಗಗನ ಮಂಡಲದಲ್ಲಿ ಹುಟ್ಟಿದ ಶಶಿಕಳೆ ಭೂಮಂಡಲದಲ್ಲಿ ಉದಯವಾದುದ ಕಂಡೆನಯ್ಯ. ಭೂಮಂಡಲದಲುದಯವಾದ ಶಶಿಕಳೆ, ತ್ರೈಜಗವ ನುಂಗಿತ್ತು ನೋಡಾ. ನಾರಿಯರ ತಲೆಯ ಮೆಟ್ಟಿ, ಮೇರುವೆಯ ಹೊಕ್ಕಿತ್ತು ನೋಡಾ. ಮೇರುಗಿರಿಯ ಪರ್ವತದಲ್ಲಿಪ್ಪಾತನನೆಯ್ದೆ ನುಂಗಿತ್ತು ನೋಡಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.