Index   ವಚನ - 107    Search  
 
ಭಗಧ್ಯಾನವೆಂಬುವ ಬಂದಿಕಾನವ ಹೊಕ್ಕು, ಸತಿಯರ ಸವಿನುಡಿಯೆಂಬ ಶಸ್ತ್ರವ ಹಾಯ್ದು, ಅಂಗನೆಯರ ಶೃಂಗಾರವೆಂಬ ಕತ್ತಲೆಗವಿದು, ಕಂಗಳು ಕೆಟ್ಟು, ಲಿಂಗ ನೆನಹೆಂಬ ಜ್ಯೋತಿ ನಂದಿತ್ತು ನೋಡಾ. ಆ ಸ್ವಯಂ ಜ್ಯೋತಿ ಕೆಡದ ಮುನ್ನ, ಅಂಗವಿಕಾರವೆಂಬ ಅರಸು ಅನಂತ ಹಿರಿಯರ ನುಂಗುವದ ಕಂಡು, ಮಹಾಜ್ಞಾನಿಗಳು ಹೇಸಿ ಕಡೆಗೆ ತೊಲಗಿದರು ನೋಡಾ ನಿಮ್ಮ ಪ್ರಮಥರು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.