ವಚನ - 1372     
 
ಬಸವಣ್ಣನೆ ಪ್ರಾಣಲಿಂಗವೆಂದು ಭಾವಿಸಿ, ದೃಷ್ಟಿನಟ್ಟು ಸೈವೆರಗಾದುದ ಕಂಡೆ-ಕಲ್ಪಿಸಿ ಮನ ನಟ್ಟು ನಿಬ್ಬೆರಗಾಯಿತ್ತಯ್ಯಾ! ಗುಹೇಶ್ವರಾ ನಿಮ್ಮಲ್ಲಿ, ಸರ್ವನಿರ್ವಾಣಿ ಸಂಗನಬಸವಣ್ಣನೆ ಎನ್ನ ಪ್ರಾಣಲಿಂಗವೆಂದರಿದು ನೀನೆನ್ನ ಒಳಕೊಂಡ ಗುರುವೆಂದು ಕಂಡೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ.